ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಇಂದು ಶುಭಸುದ್ದಿ ನೀಡಿದೆ, ಈ ಬಗ್ಗೆ ಇಲ್ಲಿದೆ ಸಣ್ಣ ವರದಿ.
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸದಿಂದ ವಿನಾಯಿತಿ
ಹೌದು, ಇಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆಯಾದ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಮಾತಾಡಿ, ಇನ್ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸದಿಂದ ವಿನಾಯಿತಿ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 1 ರಿಂದ UPI ಬಳಕೆದಾರರಿಗೆ ಶಾಕ್ ನೀಡಲಿದೆ ಈ ಹೊಸ ನಿಯಮ !
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರೆ ಸಂಘಟನೆಯವರು ಈ ಬಗ್ಗೆ ತುಂಬಾ ಸಮಯದಿಂದ ಹೊರಟ ನಡೆಸುತ್ತಿದ್ದು, ಕಾರ್ಯಕರ್ತೆಯರಿಗೆ ಅಂಗನವಾಡಿ ಕೆಲಸದ ಜೊತೆಗೆ ಚುನಾವಣೆ ಸಂದರ್ಭದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ತೊಂದರೆಗಳಿದ್ದು, ಅದರಿಂದ ವಿನಾಯಿತಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಸರ್ಕಾರವು ವಿಮರ್ಶಿಸಿ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಮೂಲಕ ಅಂಗನವಾಡಿ ಕಾರ್ಯಕರ್ತರ ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.